ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ: ಕೇಂದ್ರ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಜೂನ್‌ 17-

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಏಮ್ಸ್‌ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯ ಅವರಿಗೆ ಪತ್ರ ಬರೆದಿದ್ದಾರೆ.

ದೇಶದ ಮಹತ್ವಾಕಾಂಕ್ಷಿ ಜಿಲ್ಲೆಗಳಲ್ಲಿ ಒಂದಾಗಿರುವ ರಾಯಚೂರಿನಲ್ಲಿ ಆರೋಗ್ಯ, ಶಿಕ್ಷಣದ ಮಟ್ಟ ಮತ್ತು ತಲಾ ಆದಾಯವು ಇತರ ಪ್ರದೇಶಗಳಿಗಿಂತ ಕಡಿಮೆ ಇದೆ. ವಿಪರೀತ ಹವಾಗುಣದಿಂದಾಗಿ ಭೌಗೋಳಿಕವಾಗಿಯೂ ಪ್ರತಿಕೂಲ ವಾತಾವರಣ ಹೊಂದಿದೆ. ಈ ಎಲ್ಲ ಕಾರಣಗಳಿಂದಾಗಿ ರಾಯಚೂರಿನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳ ಅಗತ್ಯವಿದೆ. ಏಮ್ಸ್‌ ಸ್ಥಾಪನೆಯಿಂದ ಈ ಭಾಗದಲ್ಲಿ ವಿಶ್ವದರ್ಜೆಯ ವೈದ್ಯಕೀಯ ಸೌಲಭ್ಯ ಒದಗಿಸಿದಂತಾಗುತ್ತದೆ ಎಂದು ಮುಖ್ಯಮಂತ್ರಿಗಳು ಪ್ರತಿಪಾದಿಸಿದ್ದಾರೆ.

ಏಮ್ಸ್‌ ಸ್ಥಾಪನೆಗೆ ಈ ಭಾಗದ ಜನತೆ ಹಾಗೂ ಜನಪ್ರತಿನಿಧಿಗಳ ಬೇಡಿಕೆ ಹೆಚ್ಚುತ್ತಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನಮ್ಮ ಅತ್ಯಾದ್ಯತೆಯ ವಿಷಯವಾಗಿದೆ. ಆದ್ದರಿಂದ ಸಂಬಂಧಿಸಿದವರಿಗೆ ಈ ಕುರಿತು ಕ್ರಮ ವಹಿಸಲು ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಕೇಂದ್ರ ಸಚಿವರನ್ನು ಕೋರಿದ್ದಾರೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ಸ್. ಭೋಸರಾಜು ಅವರು ರಾಯಚೂರಿನಲ್ಲಿ ಏಮ್ಸ್‌ ಸ್ಥಾಪಿಸುವ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಅದರಂತೆ ಮುಖ್ಯಮಂತ್ರಿಯವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

Loading

Leave a Reply

Your email address will not be published. Required fields are marked *