ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಮುಸ್ಲಿಮರಿಗೆ (Muslims) 10 ಸಾವಿರ ಕೋಟಿ ರೂ. ಅನುದಾನ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರ ಇಂದು ಪರಿಷತ್‌ನಲ್ಲಿ ಸದ್ದು ಮಾಡಿತು. ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದರು.ಸಿಎಂ ಸಿದ್ದರಾಮಯ್ಯನವರು ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮಾವೇಶದಲ್ಲಿ ಮಾತನಾಡುತ್ತಾರೆ.
ದೇಶದ ಸಂಪತ್ತನ್ನು ನಿಮಗೆ ಹಂಚುತ್ತೇನೆ ಹಾಗೂ 10 ಕೋಟಿ ರೂ. ನಿಮಗೆ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಯಾವುದೇ ಸಮುದಾಯಕ್ಕೆ ಹಣ ಮೀಸಲಿಟ್ಟರೇ ಯಾರದ್ದೇ ವಿರೋಧವಿಲ್ಲ. ಆದರೆ ಸಿಎಂ ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ 10,000 ಕೋಟಿ ರೂ. ನೀಡುತ್ತೇನೆ ಎಂದಿದ್ದಾರೆ ಇದು ಸರಿಯಲ್ಲ ಎಂದರು.
ಸರ್ಕಾರ ಪರಿಶಿಷ್ಠ ಜಾತಿ- ಪಂಗಡಗಳಿಗೆ ಮೀಸಲಿಟ್ಟ 11,500 ಕೋಟಿ ರೂ. ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿ, ಸಮಾಜದ ಕಟ್ಟ ಕಡೆಯ ಬಡ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸರ್ವರನ್ನೊಳಗೊಂಡ ಸಮಾಜ ನಿರ್ಮಾಣ ಮಾಡುವ ಭರವಸೆ ನೀಡಿರುವ ಸಿದ್ದರಾಮಯ್ಯನವರು ಒಂದು ವರ್ಗವನ್ನು ಒಲೈಸುವ ಭರದಲ್ಲಿ, ಸಮಾಜದ ಪರಿಶಿಷ್ಠ ಜಾತಿ ಹಿಂದುಳಿದ ವರ್ಗದ ಬಡವನರನ್ನು ನಿರ್ಲಕ್ಷಿಸುತ್ತಿದ್ದಾರೆ ಅಂತ ಕಿಡಿಕಾರಿದರು.