ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ಹೆಮ್ಮಿಗೆಪುರ ವಾರ್ಡ್ ನಂಬರ್ 198ರ ಬಿಜಿಎಸ್ ಹೆಲ್ತ್ & ಎಜುಕೇಶನ್ ಸಿಟಿ ಕೆಂಗೇರಿ ಕ್ಯಾಂಪಸಿನಲ್ಲಿ “15ನೇ BGS ಸಂಸ್ಥಾಪಕರ ದಿನ ಮತ್ತು BGS ಉತ್ಸವ 2023” ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆವು. “BGS ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್” ಕಟ್ಟಡ ಉದ್ಘಾಟನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು,
ಪೂಜ್ಯ ಶ್ರೀ ಶ್ರೀ ಪ್ರಕಾಶನಾಥ ಸ್ವಾಮೀಜಿಯವರು, ಮಾಜಿ ಸಚಿವರು ಹಾಗೂ ಶಾಸಕರಾದ ಡಾ.ಅಶ್ವಥ್ ನಾರಾಯಣ್ ರವರು, ಶಾಸಕರಾದ ಎನ್ ಗೋವಿಂದರಾಜುರವರು, ಖ್ಯಾತ ಚಲನಚಿತ್ರ ನಟರಾದ ರಾಕಿಂಗ್ ಸ್ಟಾರ್ ಯಶ್ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ನಮ್ಮೊಂದಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಶ್ರೀ ಮಠದ ಭಕ್ತಾದಿಗಳು ಭಾಗವಹಿಸಿದ್ದರು.