ಗಾಜಾಪಟ್ಟಿಯಲ್ಲಿ ಹಮಾಸ್ ಉಗ್ರರ ವಶದಲ್ಲಿದ್ಧಾರೆ 199 ಒತ್ತೆಯಾಳುಗಳು..!

ಟೆಲ್ ಅವಿವ್: ಹಮಾಸ್ ಬಂಡುಕೋರ (Hamas Militants) ಸಂಘಟನೆ 199 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಇಸ್ರೇಲಿ (Israel) ಮಿಲಿಟರಿ ವಕ್ತಾರ ಡೇನಿಯಲ್ ಹಗರಿ ಮಾಧ್ಯಮ ಸಭೆಯಲ್ಲಿ ಹೇಳಿದ್ದಾರೆ. ಇದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿದ್ದ ಅವರು, 155 ಜನರನ್ನು ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಆರೋಪಿಸಿದ್ದರು. ಅಕ್ಟೋಬರ್ 7ರಂದು ಹಮಾಸ್ ರಾಕೆಟ್ ದಾಳಿ ನಡೆಸಿದ ಬಳಿಕ ಅಕ್ರಮವಾಗಿ ಇಸ್ರೇಲ್ ಗಡಿಯನ್ನು ನುಸುಳಿದೆ.

ಇಲ್ಲಿ ಜನರ ಹತ್ಯೆ ಮಾಡುವುದಲ್ಲದೇ ಮಹಿಳೆಯರು ಮಕ್ಕಳು ಸೇರಿದಂತೆ ಇಸ್ರೇಲಿ ಪ್ರಜೆಗಳನ್ನು (Citizens) ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಡೇನಿಯಲ್ ಹಗರಿ ವಿವರಿಸಿದರು. ಯುದ್ಧ ಆರಂಭವಾದ ಬಳಿಕ ಗುಂಡು ಹಾರಿಸಿ, ಇರಿದು ಮತ್ತು ಸುಟ್ಟು 1,400 ಕ್ಕೂ ಜನರನ್ನು ಹಮಾಸ್ ಹತ್ಯೆ ಮಾಡಿದೆ. ಏಳು ದಿನಗಳ ನಿರಂತರ ಬಾಂಬ್ ದಾಳಿಯು ಹಮಾಸ್ ನೆಲೆಗಳನ್ನು ನಾಶಪಡಿಸಿದೆ. ಎರಡೂ ಕಡೆಗಳಲ್ಲಿ ಒಟ್ಟು 3,000 ಜೀವಗಳನ್ನು ಯುದ್ಧ ಬಲಿ ತೆಗೆದುಕೊಂಡಿದೆ.

Loading

Leave a Reply

Your email address will not be published. Required fields are marked *