ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆ.!

ಭೋಪಾಲ್: ಮಧ್ಯಪ್ರದೇಶದ (Madhya Pradesh) ಭೋಪಾಲ್‌ನಲ್ಲಿ (Bhopal) ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ 26 ಬಾಲಕಿಯರು ನಾಪತ್ತೆಯಾಗಿರುವ ಅಘಾತಕಾರಿ ಘಟನೆ ನಡೆದಿದೆ. ಗುಜರಾತ್, ಜಾರ್ಖಂಡ್, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 26 ಬಾಲಕಿಯರು ಭೋಪಾಲ್‌ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಲ್ಲಿದ್ದರು.

ಅನುಮತಿಯಿಲ್ಲದೆ ಬಾಲಕಿಯರ ಮನೆ ನಡೆಸುತ್ತಿರುವ ಖಾಸಗಿ ಎನ್‌ಜಿಒ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (NCPCR) ಅಧ್ಯಕ್ಷ ಪ್ರಿಯಾಂಕ್ ಕನುಂಗೋ ಅವರು ಭೋಪಾಲ್‌ನ ಹೊರವಲಯದಲ್ಲಿರುವ ಪರ್ವಾಲಿಯಾ ಪ್ರದೇಶದ ಆಂಚಲ್ ಬಾಲಕಿಯರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಅವರು ರಿಜಿಸ್ಟರ್ ಪರಿಶೀಲಿಸಿದಾಗ ಅದರಲ್ಲಿ 68 ಹುಡುಗಿಯರ ನಮೂದುಗಳು ಇದ್ದವು. ಆದರೆ ಅವರಲ್ಲಿ 26 ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಬಾಲಕಿಯರ ಕುರಿತು ಮಕ್ಕಳ ನಿಲಯದ ನಿರ್ದೇಶಕ ಅನಿಲ್ ಮ್ಯಾಥ್ಯೂ ಅವರನ್ನು ಪ್ರಶ್ನಿಸಿದಾಗ ಅನುಮಾನ ವ್ಯಕ್ತವಾಗಿದೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪರ್ವಲಿಯಾ ಪೊಲೀಸರು ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

Loading

Leave a Reply

Your email address will not be published. Required fields are marked *