ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ(A case of Covid-19) ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,611 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 36,244 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (Union Ministry of Health) ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೇರಳದಲ್ಲಿ 9 ಮಂದಿ ಸೇರಿದಂತೆ ದೇಶದಾದ್ಯಂತ 36 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,31,642 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಈವರೆಗೆ ದೇಶದಲ್ಲಿ ಒಟ್ಟು 4,49,64,289 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.07ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.74ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.