ಬೆಂಗಳೂರು: ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ 6 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಠಾತ್ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ. ಇನ್ನೂ ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಅನುಮೋದನೆ ನೀಡಿದೆ. ಜೊತೆಗೆ ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅಸ್ತು ಹೇಳಲಾಗಿದೆ. ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ.