ನವದೆಹಲಿ: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ (75th Republic Day) ಸಂಭ್ರಮ ಮನೆ ಮಾಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ (Flag hoisting) ನೆರವೇರಿದ್ದು, ಪರೇಡ್‌ಗಳಲ್ಲಿ ವಿಶೇಷ ಪ್ರದರ್ಶನಗಳು ಕಂಡುಬಂದಿವೆ.
ಈ ಸಂದರ್ಭದಲ್ಲಿ 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ (Padma Awards 2024) ಆಯ್ಕೆಯಾಗಿರುವ 132 ಸಾಧಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನೂ ತಿಳಿಸಿದ್ದಾರೆ. ಕರ್ನಾಟಕದ 9 ಮಂದಿ ಸೇರಿ ಒಟ್ಟು 132 ಮಂದಿಗೆ ಪ್ರಶಸ್ತಿ ಲಭಿಸಿದ್ದು, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ.
ಈ ವ್ಯಕ್ತಿಗಳು ಅದ್ಭುತ ಉದಾಹರಣೆಗಳನ್ನ ಸೃಷ್ಟಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಸೇವೆಯಿಂದ ರಾಷ್ಟ್ರದ ಘನತೆಯನ್ನ ಹೆಚ್ಚಿದ್ದಾರೆ. ವಿವಿಧ ಕ್ಷೇತ್ರಗಳಿಗೆ ವಿಶಿಷ್ಟ ಕೊಡುಗೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆ ತರುತ್ತಿರುವ ಸಾಧಕರಿಗೆ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.