ಪಾಟ್ನಾ: ಬಿಹಾರದ (Bihar) ಮುಜಾಫರ್ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ದೋಣಿಯಲ್ಲಿ 30 ಮಕ್ಕಳು ಪ್ರಯಾಣಿಸುತ್ತಿದ್ದರು. ಇದುವರೆಗೆ 20 ಮಕ್ಕಳನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ತಂಡವು ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.