ಕಲಬುರಗಿ: ತವರು ಮನೆಗೆ ಹೋಗಿದ್ದ ಪತ್ನಿಯನ್ನು ಪತಿಯೇ ಗುಂಡಿಟ್ಟು ಕೊಂದಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ಅಲ್ಲೂರ್ ಕೆ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಘಟನೆ ನಡೆದಿದೆ. ಹನಮವ್ವ (36) ಕೊಲೆಯಾದ ಮಹಿಳೆ. ಆಕೆಯ ಗಂಡ ಬಸವರಾಜ್ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಮದುವೆ ಆದಾಗಿಂದ ಗಂಡ-ಹೆಂಡತಿ ನಡುವೆ ನಿರಂತರ ಜಗಳವಾಗುತ್ತಿದ್ದು, ಗಂಡನ ಕಿರುಕುಳಕ್ಕೆ ಬೇಸತ್ತು ಮಹಿಳೆ ತವರು ಮನೆ ಸೇರಿದ್ದಳು. ಆದರೆ ಇಂದು ಬೆಳಗ್ಗೆ ತವರು ಮನೆಯಲ್ಲಿದ್ದ ಪತ್ನಿಯನ್ನು ಬಸವರಾಜ್ ಗುಂಡಿಟ್ಟು ಕೊಲೆ ಮಾಡಿದ್ದಾನೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.