ಕಾವೇರಿ ಪ್ರಾಧಿಕಾರದ ಮುಂದೆ ನೀರಿನ ಕೊರತೆ ಬಗ್ಗೆ ಹೇಳಿದ್ದೇವೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಕಾವೇರಿ ಪ್ರಾಧಿಕಾರದ ಮುಂದೆ ನೀರಿನ ಕೊರತೆ ಬಗ್ಗೆ ಹೇಳಿದ್ದೇವೆ. ಶೀಘ್ರದಲ್ಲಿ ಸಭೆ ನಡೆಯಲಿದೆ ಅಲ್ಲಿಯೂ ಸಮರ್ಥ ವಾದ ಮಾಡಲಿದ್ದೇವೆ. ಸುಪ್ರೀಂ ಕೋರ್ಟ್ ಮುಂದೆ ಹೋಗಲು ನಾವು ತಯಾರಿದ್ದೇವೆ ಎಂದು ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರದ ಆದೇಶವನ್ನ ಗಮದಲ್ಲಿಟ್ಟುಕೊಂಡು ಸುಪ್ರೀಂ ಮುಂದೆ ಹೋಗ್ತೇವೆ. ಕೋರ್ಟಿಗೂ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದೇವೆ. ಪ್ರಾಧಿಕಾರ ವಾಸ್ತವ ಸ್ಥಿತಿ ಗಮನಿಸಿ ಆದೇಶ ನೀಡುವ ವಿಶ್ವಾಸವಿದೆ ಎಂದರು. ಮುಂದಿನ ವಾರದಲ್ಲಿ ಮಳೆ ಬರುವ ಸಾಧ್ಯತೆ ಇದೆ. ಅವಾಗ 10-12 ಟಿಎಂಸಿ ನೀರು ಶೇಕರಣೆ ಆದರೆ ಎಲ್ಲರಿಗೂ ಒಳ್ಳೆಯದು ಆಗಲಿದೆ. ನಮ್ಮ ರೈತರಿಗೆ ಒಳಿತಾಗಲೂ ನಾವು ಎಲ್ಲದಕ್ಕೂ ಸಿದ್ದರಿದ್ದೇವೆ ಎಂದು ಹೇಳಿದರು.

ಮಳೆ ಕೊರತೆ ವಿಚಾರದಲ್ಲಿ ಮುನ್ನೆಚ್ಚರಿಕೆ ತೆಗೆದುಕೊಂಡಿಲ್ಲ ಎಂಬ ಬಿಜೆಪಿ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿ ಅವರು ಅನುಭವಸ್ಥರು, ಮುಂಚೆ ಹೇಳಿದಿದ್ದರೆ ಸಲಹೆ ತೆಗೆದುಕೊಳ್ತಿದ್ದೆವು. ಕೇಂದ್ರ ಸರ್ಕಾರದ ಅವ್ರದ್ದೆ ಇದೆ. ಮುಂದಿನ ಬಾರಿ ಅವರ ಸಲಹೆ ತೆಗೆದುಕೊಳ್ತೇವೆ ಎಂದು ವ್ಯಂಗ್ಯವಾಡಿದರು. 196 ತಾಲೂಕು ಬರ ಅಂತ ಘೋಷಣೆ ಮಾಡಲಾಗಿದೆ. 34 ತಾಲ್ಲೂಕು ಗೈಡ್ ಲೈನ್ಸ್ ಬರ್ತಿಲ್ಲ. ಅದನ್ನೂ ಗೈಡ್ ಲೈನ್ಸ್ ಒಳಗೆ ತಂದು ಬರ ಅಂತ ಘೋಷಣೆ ಮಾಡುವ ಪ್ರಯತ್ನ ಮಾಡ್ತಿದ್ದೇವೆ. ಪಾರ್ಲಿಮೆಂಟರಿ ಬೋರ್ಡ್ಗೆ ತಂದು ನಿರ್ಧಾರ ಮಾಡ್ತೀವಿ. ರೈತರಿಗೆ ಐದು ಲಕ್ಷ ರೂಪಾಯಿ ಬಡ್ಡಿ ರಹಿತ ಸಾಲ ಕೊಡ್ತಿದ್ದೇವೆ. ಹಾಲು ದರ ಏರಿಸಿ ರೈತರಿಗೆ ಕೊಡಲಾಗ್ತಿದೆ. ಇದನ್ನೆಲ್ಲ ಸಿದ್ದರಾಮಯ್ಯ ತಾನೆ ಮಾಡಿದ್ದು ಎಂದು ಚಲುವರಾಯಸ್ವಾಮಿ ಪ್ರಶ್ನಿಸಿದರು.

Loading

Leave a Reply

Your email address will not be published. Required fields are marked *