ಬೆಂಗಳೂರು;-ಅಪರಾಧ ಪ್ರಕರಣಗಳನ್ನು ನಿಯಂತ್ರಿಸದಿದ್ದರೆ ಎಸ್ಪಿಗಳೇ ಹೊಣೆ ಎಂದು CM ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಜೂಜು, ಬೆಟ್ಟಿಂಗ್ ದಂಧೆ ಹಾಗು ಡ್ರಗ್ಸ್ ಚಟುವಟಿಕೆ ಸೇರಿದಂತೆ ಅಕ್ರಮಗಳು ಆಯಾ ಠಾಣಾ ವ್ಯಾಪ್ತಿಗಳ ಕೆಳ ಹಂತದ ಅಧಿಕಾರಿಗಳ ಗಮನಕ್ಕೆ ಬರದೇ ಯಾವುದು ನಡೆಯುವುದಿಲ್ಲ.
ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರನ್ನು ಕೂಡಲೇ ಮಟ್ಟಹಾಕಬೇಕು. ಸಾಮಾನ್ಯವಾಗಿ ಕೆಳಹಂತದ ಅಧಿಕಾರಿಗಳು ತಪ್ಪು ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದು ಒಂದು ಭಾಗ. ಆದರೆ ಇನ್ಮುಂದೆ ಸಂಘಟಿತ ಅಪರಾಧಗಳನ್ನು ನಿಯಂತ್ರಿಸದಿದ್ದರೆ ಎಸ್ಪಿ ಮಟ್ಟದ ಅಧಿಕಾರಿಗಳೇ ಹೊಣೆಗಾರರನ್ನಾಗಿಸಿ ಅವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.
ಠಾಣಾಧಿಕಾರಿಗಳ ಗಮನಕ್ಕೆ ಬರದಂತೆ ಯಾವ ಅಪರಾಧಗಳೂ, ಕರಾಳ ದಂಧೆಗಳೂ ನಡೆಯಲು ಸಾಧ್ಯವಿಲ್ಲ. ಹಿರಿಯ ಅಧಿಕಾರಿಗಳು ಠಾಣೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವುದು ಕಡ್ಡಾಯ. ಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ಸಲಹೆ ನೀಡಿದರು.