ಹೈಕಮಾಂಡ್ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ: ಸಚಿವ ಕೆಎನ್ ರಾಜಣ್ಣ

ತುಮಕೂರು : ಮೂರು ಡಿಸಿಎಂಗಳನ್ನು ಮಾಡಿದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಅನುಕೂಲ ಆಗಲಿದೆ. ಎಲ್ಲ ಸಮುದಾಯಗಳನ್ನು ನಮಗೆ ಬೆಂಬಲ ನೀಡಲು ಸಹಾಯ ಆಗುತ್ತದೆ. ಈ ಬಗ್ಗೆ ಹೈಕಮಾಂಡ್ಗೆ ಪತ್ರ ಬರೆಯುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಈ ಮೂಲಕ ಮೂವರು ಡಿಸಿಎಂ ಸೃಷ್ಟಿ ಬಗ್ಗೆ ನೀಡಿದ್ದ ತಮ್ಮ ಹೇಳಿಕೆಯನ್ನು ರಾಜಣ್ಣ ಸಮರ್ಥಿಸಿಕೊಂಡಿದ್ದಾರೆ.ತುಮಕೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಮ್ಮ ಮನೆ ಹೊಸ್ತಿಲಲ್ಲಿ ಬಂದು ನಿಂತಿದೆ. ಎಲ್ಲಾ ಪಕ್ಷಗಳು ಚುನಾವಣೆಗೆ ಸಜ್ಜಾಗುತ್ತಿವೆ. ಕಾಂಗ್ರೆಸ್ ರಾಜ್ಯದಲ್ಲಿ ಲೋಕಸಭೆ ಕ್ಷೇತ್ರಗಳನ್ನು ಗೆಲ್ಲಬೇಕು. ನಾವು ಗೆಲ್ಲುತ್ತೇವೆ ಅನ್ನೋ ವಿಶ್ವಾಸವಿದೆ. ಮೂರು ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿದ್ರೆ, ಎಲ್ಲ ಸಮುದಾಯಗಳು ನಮಗೆ ಬೆಂಬಲ ನೀಡಲು ಅನುಕೂಲ ಆಗುತ್ತೆ. ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರಿಗೆ, ವೀರಶೈವ ಸಮುದಾಯಗಳಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ಸೃಷ್ಟಿ ಮಾಡಬೇಕು ಎಂದರು.

ಮೂವರು ಡಿಸಿಎಂಗಳನ್ನು ಸೃಷ್ಟಿಸುವುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆಯುತ್ತೇನೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ. ಯಾರನ್ನು ಆಯ್ಕೆ ಮಾಡುತ್ತಾರೆ ಅಂತ ಹೈಕಮಾಂಡ್ ನಿರ್ಣಯ ಮಾಡಬೇಕು. ಹೈಕಮಾಂಡ್ ತೀರ್ಮಾನವೇ ನಮ್ಮೆಲ್ಲರ ತೀರ್ಮಾನ. ಪಕ್ಷದ ಹಿತದೃಷ್ಟಿಯಿಂದ ಇದು ಒಳ್ಳೆಯದು, ಈ ಹೇಳಿಕೆಗೆ ಯಾರು ಸಹಮತ ವ್ಯಕ್ತಪಡಿಸುತ್ತಾರೋ ಅವರೆಲ್ಲರನ್ನು ಕರೆದುಕೊಂಡು ಹೋಗ್ತೀನಿ ಎಂದು ಹೇಳಿದರು.

Loading

Leave a Reply

Your email address will not be published. Required fields are marked *