ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ದೇವಾಲಯಗಳಲ್ಲಿ, ಗಲ್ಲಿ-ಗಲ್ಲಿಗಳಲ್ಲೂ ಗಣೇಶ ಪ್ರತಿಷ್ಠಾಪನೆ ಮಾಡಿದ್ದಾರೆ. ಮನೆಗಳಲ್ಲೂ ಗೌರಿ-ಗಣೇಶನ ಕೂರಿಸಿ ಪೂಜೆ ಸಲ್ಲಿಸುತ್ತಿದ್ದು, ಸಿಲಿಕಾನ್ ಸಿಟಿಯ ಮನೆಗಳಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಗೌರಿ-ಗಣೇಶ ಎರಡೂ ಹಬ್ಬ ಈ ಬಾರಿ ಒಂದೇ ದಿನ ಬಂದಿವೆ, ಹೀಗಾಗಿ ಎಲ್ಲೆಲ್ಲೂ ಗೌರಿ-ಗಣೇಶನ ಪೂಜೆಯ ವೈಭೋಗ. ಸಿಲಿಕಾನ್ ಸಿಟಿ ತುಂಬೆಲ್ಲಾ ಗಣೇಶ ಮೂರ್ತಿಗಳು ರಾರಾಜಿಸುತ್ತಿವೆ. ದೊಡ್ಡ ಗಣಪತಿ ದೇಗುಲದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜೆ ನಡೆಯುತ್ತಿದೆ. ಹಾಗೆ ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ದಕ್ಷಿಣಮುಖ ನಂದಿ ತೀರ್ಥ ಕಲ್ಯಾಣಿ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.