ಹಳೇ ಮೈಸೂರು ಭಾಗದ ಟಿ.ನರಸೀಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರೇವಣ್ಣ ಹಾಗೂ ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಬಿಜೆಪಿಯನ್ನು ಗೆಲ್ಲಿಸಲು ಜನ ನಿರ್ಧಾರ ಮಾಡಿದ್ದಾರೆ. ವಿ.ಸೋಮಣ್ಣ ಅಂದರೆ ವಿಕ್ಟರಿ ಸೋಮಣ್ಣ ಎಂದು ಅರ್ಥ. ಸೋಮಣ್ಣಗೆ ಜನರ ಸೇವೆ ಮಾಡೋದು ಬಿಟ್ಟು ಬೇರೆ ಗೊತ್ತಿಲ್ಲ. ಗೋವಿಂದರಾಜನಗರದ ಅಭಿವೃದ್ಧಿ ವರುಣಗೆ ಬೇಕೋ ಬೇಡವೋ? ಟಿ.ನರಸೀಪುರ ಕ್ಷೇತ್ರಕ್ಕೆ ಡಾ.ರೇವಣ್ಣ ಸೇವೆ ಬೇಕೋ ಬೇಡವೋ? ಈ ಬಾರಿ ಟಿ.ನರಸೀಪುರ, ವರುಣ ಅಭಿವೃದ್ಧಿಗೆ ಅವಕಾಶ ನೀಡಿ ಎಂದು ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ಸಿಎಂ ಬೊಮ್ಮಾಯಿ ಹೇಳಿದರು.