ಬೆಂಗಳೂರು: ಕಾವೇರಿ ವಿವಾದದ ಹಿನ್ನಲೆಯಲ್ಲಿ ರೈತ ಸಂಘಟನೆಗಳ ಕರೆ ಕೊಟ್ಟ ಮಂಡ್ಯ ಜಿಲ್ಲೆ ಬಂದ್ ಸಂದರ್ಭದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮನವಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಾಂತಿ ಕಾಪಾಡಲು ಎಲ್ಲ ತಯಾರಿ ಮಾಡಿದ್ದೇವೆ. ಬಂದ್ ಹಿನ್ನಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಪ್ರತಿಭಟನಾಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಬಾರದಂತೆ, ಶಾಂತಿ ಸೌಹಾರ್ದತೆ ಕಾಪಾಡುವಂತೆ ಅವರಲ್ಲಿ ಮನವಿ ಮಾಡಿದ್ದೇವೆ ಎಂದರು.
ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನು ಬಾಹಿರ ಚಟುವಟಿಕೆ ಮಾಡಬಾರದು ಎಂದು ಗೃಹ ಸಚಿವರು ಮನವಿ ಮಾಡಿದರು.