ಹುಬ್ಬಳ್ಳಿ: ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಪ್ರಶ್ನೆ ಬರುವುದಿಲ್ಲ. ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳಿಬ್ಬರು ಒಂದೆಡೆ ಕುಳಿತು ಚರ್ಚೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಡ್ಡಿ ಮುರಿದಂತೆ ಹೇಳಿದ್ದಾರೆ. ಈ ಮೂಲಕ ಉಭಯ ರಾಜ್ಯಗಳ ನಡುವಿನ ಮಾತುಕತೆಯೇ ಸಮಸ್ಯೆಗೆ ಪರಿಹಾರ ಎಂದು ಸಲಹೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಆರಂಭದಿಂದಲೇ ತಪ್ಪು ಹೆಜ್ಜೆ ಹಾಕಿದ್ದು ಈಗ ಈ ವಿಚಾರದಲ್ಲಿ ಪ್ರಧಾನಿ ಮತ್ತು ಕೇಂದ್ರ ಸರ್ಕಾರದ ಮಧ್ಯಸ್ಥಿಕೆಯ ಪ್ರಶ್ನೆ ಬರುವುದಿಲ್ಲ. ಇಷ್ಟರ ನಡುವೆಯೂ ನಾವು ಸಾಧ್ಯವಾದಷ್ಟು ಸಹಕಾರವನ್ನು ರಾಜ್ಯ ಸರ್ಕಾರಕ್ಕೆ ಕೊಡುತ್ತಿದ್ದೇವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ 2500 ಕ್ಯುಸೆಕ್ ನೀರು ಬಿಡುವುದಾಗಿ ಹೇಳುವ ಅವಶ್ಯಕತೆ ಇದ್ದಿಲ್ಲ ಎಂದರು.