ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಹರಿಸದಂತೆ ಆಗ್ರಹಿಸಿ ಮಂಡ್ಯದಲ್ಲಿ ಆರಂಭಿಸಿರುವ ರೈತರ ಹೋರಾಟದ ಕಿಚ್ಚು ಕಟ್ಟೆಯೊಡೆದಿದೆ. ಮಂಡ್ಯ ಬಂದ್ (Mandya Bandh) ಹಿನ್ನೆಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ರೈತರು (Farmers), ಕನ್ನಡಪರ ಹಾಗೂ ಪ್ರಗತಿ ಪರ ಸಂಘನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಬಿಜೆಪಿ, ಜೆಡಿಎಸ್ ಕಾರ್ಯಕರ್ತರೂ ಸಹ ಪ್ರತಿಭಟನೆಗೆ ಧುಮುಕಿದ್ದು,
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಮಂಡ್ಯದಲ್ಲಿ ಕೆಲ ರೈತರು ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕ ಸರ್ಕಾರ ತಮಿಳುನಾಡಿಗೆ ನೀರುಬಿಟ್ಟು ರೈತರ ಬಾಯಿಗೆ ಮಣ್ಣುಹಾಕಿದೆ ಎಂದು ಹೇಳಿ ತಾವೇ ಬಾಯಿಗೆ ಮಣ್ಣು ಹಾಕಿಕೊಂಡು ಅಸಮಾಧಾನ ಹೊರಹಾಕಿದ್ದಾರೆ.