ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಲಿಂಗಾಯತ ನಾಯಕರಿಕೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ ಶಾಮನೂರು ಶಿವಶಂಕರಪ್ಪ ವೀರಶೈವ ಸಮಾಜದ ರಾಷ್ಟ್ರೀಯ ಅಧ್ಯಕ್ಷರು. ಶಾಮನೂರು ಅವರು ವ್ಯಕ್ತಪಡಿಸಿರುವ ಭಾವನೆಗಳಿಗೆ ನನ್ನ ಸಂಪೂರ್ಣ ಬೆಂಬಲ ಇದೆ. ವೀರಶೈವ ಸಮುದಾಯದವರು ಬಹಳ ದೊಡ್ಡ ಪ್ರಮಾಣದಲ್ಲಿ ಇದ್ದಾರೆ.
ಆದರೆ ಸಮುದಾಯದವರನ್ನು ಕಡೆಗಣಿಸಲಾಗುತ್ತಿದೆ. ಇದರ ಬಗ್ಗೆ ಶಾಮನೂರು ಅವರಿಗೆ ಕಳಕಳಿ ಇದೆ. ಹೀಗಾಗಿ ಎಲ್ಲ ವೀರಶೈವ ಸಮುದಾಯದ ಮುಖಂಡರಲ್ಲಿ ಇದೇ ತಳಮಳ ಇದೆ. ಹೀಗಾಗಿ ಅವರ ಹೇಳಿಕೆಯನ್ನು ನಾನು ಸಂಪೂರ್ಣ ಒಪ್ಪುತ್ತೇನೆ. ಈ ಸಮಯದಲ್ಲಿ ವೀರಶೈವ ಲಿಂಗಾಯತ ಸಮಾಜದವರು ಜಾಗೃತ ಆಗಬೇಕು, ಒಂದಾಗಬೇಕು, ಒಟ್ಟಾಗಬೇಕು ಅನ್ನೋ ಕರೆಯನ್ನು ನಾನು ಸಹ ಕೊಡುತ್ತೇನೆ ಎಂದರು.