ಭೀಕರ ಪ್ರವಾಹಕ್ಕೆ 129 ಮಂದಿ ಬಲಿ

ರುವಾಂಡಾ : ಉತ್ತರ ಮತ್ತು ಪಶ್ಚಿಮ ರುವಾಂಡಾದಲ್ಲಿ ಸಂಭವಿಸಿದ ಭೀಕರವ ಪ್ರವಾಹಕ್ಕೆ ಕನಿಷ್ಠ 129 ಜನರು ಸಾವನ್ನಪ್ಪಿದ್ದು ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ರಾತ್ರಿ ಸುರಿದ ಭಾರಿ ಮಳೆಯು ದೇಶದ ಉತ್ತರ ಮತ್ತು ಪಶ್ಚಿಮ ಪ್ರಾಂತ್ಯಗಳಲ್ಲಿ ಪ್ರವಾಹ ಉಂಟು ಮಾಡಿದೆ.

ಅತಿ ಹೆಚ್ಚು ಹಾನಿಗೊಳಗಾದ ಪಶ್ಚಿಮ ಪ್ರಾಂತ್ಯದಲ್ಲಿ 95 ಜನ ಮತ್ತು ಉತ್ತರ ಪ್ರಾಂತ್ಯದಲ್ಲಿ 14 ಜನರು ಸಾವನ್ನಪ್ಪಿದ್ದು, ಪ್ರವಾಹಕ್ಕೆ ಹಲವಾರು ಮನೆಗಳು ಕೊಚ್ಚಿಹೋಗಿವೆ. ರಸ್ತೆಗಳು ಸಂಪೂರ್ಣ ಬಂದ್ ಆಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಪೊಲೀಸರು ಪ್ರವಾಹದಿಂದ ತತ್ತರಿಸಿರುವ ಜನರ ರಕ್ಷಣಾ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಜನರಿಗೆ ಸೂಕ್ತ ಆಹಾರ ಹಾಗೂ ಔಷಧಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಮೃತಪಟ್ಟವರನ್ನು ಹೂಳಲು ಕ್ರಮಕೈಗೊಳ್ಳಲಾಗಿದೆ ಎಂದು ತುರ್ತು ನಿರ್ವಹಣೆಯ ಉಸ್ತುವಾರಿ ಸಚಿವರು ತಿಳಿಸಿದ್ದಾರೆ.

Loading

Leave a Reply

Your email address will not be published. Required fields are marked *