ಬೆಳಗಾವಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ಗಳು ಹಿಂಪಡೆಯುವ ವಿಚಾರ ಸಂಬಂಧ ಬೆಳಗಾವಿ ಏರ್ಪೋರ್ಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣಗಳು ಹಿಂಪಡೆಯುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹ ಇಲಾಖೆಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು,
ವಕೀಲರು ಹಾಗೂ ಹೋರಾಟಗಾರರು ಒಂದು ಪತ್ರ ಬರೆದಿದ್ದಾರೆ. ಅದರ ಮೇಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ರ ಬರೆದಿದ್ದಾರೆ. ಆ ಪತ್ರವನ್ನ ನಾನು ಇವತ್ತೇ ನೋಡಿದ್ದು. ಯಾವುದೇ ಕೇಸ್ ಹಿಂಪಡೆಯುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ತಿಳಿಸಿದರು