ಕಲಬುರಗಿ: ರಾಜ್ಯದೆಲ್ಲೆಡೆ ಮಳೆ ಕೊರತೆಯಾಗಿದೆ. 195 ತಾಲೂಕುಗಳನ್ನು ಬರಪೀಡಿತ ಅಂತಾ ಘೋಷಣೆ ಮಾಡಿದ್ದೇವೆ ಎಂದು ಕಲಬುರಗಿಯಲ್ಲಿ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಅ.10ರಂದು ಕೇಂದ್ರ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡುತ್ತೆ.
ಅಧಿಕಾರಿಗಳ 3 ತಂಡ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿದ್ದಾರೆ. ಬೆಳೆ ಸರ್ವೆ ನಡೆಸಲು ನಮ್ಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅ.10ರೊಳಗೆ ಸರ್ವೆ ಕಾರ್ಯ ಮುಗಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ರೈತರ ಆತ್ಮಹತ್ಯೆ ಪ್ರಕರಣ ತಡೆಗಟ್ಟಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದರು.