ಹಾಸನ: ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುವುದನ್ನು ಯಾರೂ ತಪ್ಪಿಸಲಾಗದು ಎಂದು ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಮಾತನಾಡಿದ ಸಚಿವರು, ” ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಇಳಿಯುವುದರಿಂದ ಮುಂದಿನ 15 ವರ್ಷಗಳ ಕಾಲ ಅಧಿಕಾರ ನಡೆಸುವುದನ್ನು ಯಾರೂ ತಪ್ಪಿಸಲಾಗದು ಎಂದು ಹೇಳಿದರು.
ಮುಖ್ಯಮಂತ್ರಿಯ ಅವಧಿ ಎಷ್ಟು ವರ್ಷ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಮೀರ್ ಅಹ್ಮದ್, ” ಕಾಂಗ್ರೆಸ್ ಪಕ್ಷ ಹೈಕಮಾಂಡ್ ಅಣತಿಯಂತೆ ನಡೆಯುವ ಪಕ್ಷ, ಎಲ್ಲ ತೀರ್ಮಾಮಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಪಕ್ಷದ ಸದಸ್ಯರೆಲ್ಲಾ ಅದಕ್ಕೆ ಬದ್ಧರಾಗಿರುತ್ತಾರೆ. ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಇಳಿಯುವುದರಿಂದ ಮುಂದಿನ 15 ವರ್ಷಗಳ ಕಾಲ ಅಧಿಕಾರ ನಡೆಸುವುದನ್ನು ಯಾರೂ ತಪ್ಪಿಸಲಾಗದು ” ಎಂದರು.