ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಸಮಿತಿ ಘಟನಾ ಸ್ಥಳಕ್ಕೆ ಭೇಟಿ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಮಾಹಿತಿ ಕಲೆಹಾಕಲು ನಗರಕ್ಕೆ ತೆರಳಿದೆ. ತಂಡದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಡಾ.ಅಶ್ವತ್ಥ್ ನಾರಾಯಣ್,
ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಚನ್ನಬಸಪ್ಪ ಇದ್ದಾರೆ. ಪ್ರಕರಣ ಹಿನ್ನೆಲೆ ಪರಿಸ್ಥಿತಿಯನ್ನು ಅವಲೋಕಿಸಲು ಬಿಜೆಪಿ ತಂಡ ಈ ನಿರ್ಧಾರ ಕೈಗೊಂಡಿದೆ. ಮೊದಲಿಗೆ ಬಿಜೆಪಿ ಮುಖಂಡರ ತಂಡ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದೆ. ಈ ವೇಳೆ ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಏಳು ಜನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದೆ. ಅಲ್ಲದೇ ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದೆ.