ಚಿತ್ರದುರ್ಗ: ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ 6 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬದವರಿಗೆ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೃತರ ಕುಟುಂಬದ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಳ್ಳಲಿದೆ.
ಕವಾಡಿಗರಹಟ್ಟಿ ಬಡಾವಣೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ನೀಡುತ್ತೇವೆ. ಕವಾಡಿಗರಹಟ್ಟಿ ನಿವಾಸಿಗಳಿಗೆ 3 ಎಕರೆ ಜಮೀನಿನಲ್ಲಿ ವಸತಿ ವ್ಯವಸ್ಥೆ ನಿರ್ಮಿಸಲಾಗುವುದು. ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.