ಬೆಂಗಳೂರು: ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗ್ತಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಲಿಂಗಾಯತ ಸಮುದಾಯ ಕೂಡ ಈ ಬಾರಿ ಹೆಚ್ಚು ಮತ ನೀಡಿದೆ. ಒಕ್ಕಲಿಗರು, ಬ್ರಾಹ್ಮಣರು, ಜೈನರು, ಬೌದ್ಧರು,
ಒಬಿಸಿ ಸೇರಿದಂತೆ ಎಲ್ಲ ಸಮುದಾಯದವರೂ ಮತ ನೀಡಿದ್ದಕ್ಕೆ ಅಧಿಕಾರಕ್ಕೆ ಬಂದಿದ್ದೇವೆ. ಲಿಂಗಾಯತ ಅಧಿಕಾರಿಗಳ ಕಡೆಗಣನೆ ಅನ್ನೋದು ಏನೂ ಇಲ್ಲ. ಶಾಮನೂರು ಶಿವಶಂಕರಪ್ಪ ಹಿರಿಯ ನಾಯಕರು. ಲೋಪದೋಷ ಇದ್ದರೆ ಸಿಎಂ ಜೊತೆ ಚರ್ಚಿಸಿ ಸರಿಪಡಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.