ಪ್ಯಾಲೆಸ್ತೀನ್’ನಲ್ಲಿರುವ ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ಯಾಲೆಸ್ತೀನ್’ನಲ್ಲಿರುವ ಭಯೋತ್ಪಾದಕರಿಗೆ (Paletine Terrorists) ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಭಯೋತ್ಪಾದಕರು ಒಂದೇ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.

ನಗರದಲ್ಲಿ ಮಾತನಾಡಿದ ಅವರು, ಅಮಾಯಕರು, ಹೆಣ್ಣುಮಕ್ಕಳು, ಮಕ್ಕಳ ಮೇಲೆ ಬಾಂಬ್ ದಾಳಿ ಮಾಡಲಾಗುತ್ತಿದೆ. ಇದನ್ನು ಯಾವುದೇ ಸಮಾಜ ಹಾಗೂ ಸಮುದಾಯ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು

ಇದೊಂದು ಅಂತಾರಾಷ್ಟ್ರೀಯ ವಿಚಾರ. ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ಬಹಳ ವರ್ಷದ ಸಂಘರ್ಷ ಇದೆ. ಪ್ಯಾಲೆಸ್ತೀನ್ ಹಮಾಸ್ ಉಗ್ರವಾದಿಗಳು ಪ್ಯಾಲೆಸ್ತೀನ್ ನಾಗರಿಕರಲ್ಲ. ಅದನ್ನು ಕಾಂಗ್ರೆಸ್ ಮರೆಮಾಚಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ (Congress) ಮತ್ತೆ ತುಷ್ಟೀಕರಣದ ರಾಜಕಾರಣಕ್ಕೆ ಇಳಿಯುತ್ತಿದೆ. ಇದು ದೊಡ್ಡ ದುರಂತ ಎಂದು ಅಸಮಾಧಾನ ಹೊರಹಾಕಿದರು.

Loading

Leave a Reply

Your email address will not be published. Required fields are marked *