ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ: ಡಿ.ಕೆ.ಶಿವಕುಮಾರ್

ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಅತ್ತಿಬೆಲೆ ಪಟಾಕಿ ಅವಘಡದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆ ನಂತರ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ 5 ವರ್ಷಕ್ಕೆ ನೀಡಿರುವ ಪಟಾಕಿ ಮಳಿಗೆ,

ದಾಸ್ತಾನು ಪರವಾನಗಿಯನ್ನು ಇನ್ನು ಮುಂದೆ ಒಂದು ವರ್ಷಕ್ಕೆ ಮಾತ್ರ ನೀಡಲಾಗುವುದು. ಈ ಹಿಂದಿನ ಕಾನೂನುಗಳನ್ನು ಮೀರಿ ಅಧಿಕಾರಿಗಳು ಪರವಾನಗಿ ನೀಡಿದ್ದರೆ ಅಂತಹ ಅಧಿಕಾರಿಗಳನ್ನು ಅಮಾನತಿನಲ್ಲಿ ಇಡಲಾಗುವುದು, ಪರಿಶೀಲನೆ ಮಾಡದ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು ಎಂದರು.

Loading

Leave a Reply

Your email address will not be published. Required fields are marked *