ದೆಹಲಿ: ಕರ್ನಾಟಕ – ತಮಿಳುನಾಡು ಕಾವೇರಿ ನೀರು ಹಂಚಿಕೆ ವಿವಾದದ ಕುರಿತು ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಸಭೆಯಲ್ಲಿ ಪುನಃ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿದೆ.ಈಗ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ.
ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಸೂಚನೆ ನೀಡಿದೆ. ಅಕ್ಟೋಬರ್ 16ರಿಂದ ಅ.31ರವರೆಗೆ ನೀರು ಹರಿಸುವಂತೆ ಸೂಚನೆ ನೀಡಲಾಗಿದೆ.