ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ.ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 23 ಬಾಕ್ಸ್ಗಳಲ್ಲಿದ್ದ 42 ಕೋಟಿ ರೂಪಾಯಿ ಸೀಜ್ ಮಾಡಿದ್ದಾರೆ. ಅಶ್ವಥಮ್ಮ ಅವರು ವಾರ್ಡ್ ನಂಬರ್ 95ರಲ್ಲಿ ಕಾರ್ಪೋರೇಟರ್ ಆಗಿದ್ದು, ಇದೀಗ ಅವರ ಸುಲ್ತಾನ್ ಪಾಳ್ಯದ ಮನೆಯ ಮೇಲೆ ಐಟಿ ದಾಳಿಯಾಗಿದೆ.
ದಾಳಿ ವೇಳೆ ಮನೆಯ ಬೆಡ್ರೂಂನಲ್ಲಿ 42 ಕೋಟಿ ಹಣ ಸಿಕ್ಕಿದೆ. ಬಾಕ್ಸ್ ಗಳಲ್ಲಿ ಗರಿ ಗರಿ 500 ರೂಪಾಯಿ ನೋಟಿನ ಕಂತೆಯೇ ಪತ್ತೆಯಾಗಿದೆ. 23 ಬಾಕ್ಸ್ ನಲ್ಲಿ 42 ಕೋಟಿ ಹಣ ಸಿಕ್ಕಿದ್ದು, ಒಂದೊಂದು ಬಾಕ್ಸ್ ಅಲ್ಲೂ 1ಕೋಟಿ 65 ಲಕ್ಷ ಹಣ ಕೂಡಿಡಲಾಗಿತ್ತು. ಜಸ್ಟ್ 1 ಗಂಟೆ ಕಳೆದಿದ್ದರೆ ಹಣದ ಸಮೇತ ಎಸ್ಕೇಪ್ ಆಗುತ್ತಿದ್ದರು. ಕಾರಿನಲ್ಲಿ ತಮಿಳುನಾಡಿಗೆ ಹಣ ಸಾಗಾಟ ಮಾಡಲು ತಯಾರು ಮಾಡಿದ್ದರು