14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ (Balarama Elephant) ಭಾನುವಾರ ಸಾವಿಗೀಡಾಯಿತು. ದಸರಾ ಆನೆ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

“ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ” ಎಂದು ಮೋದಿ ಕನ್ನಡದಲ್ಲೇ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

Loading

Leave a Reply

Your email address will not be published. Required fields are marked *