ಚುನಾವಣೆಯಲ್ಲಿ ಬಿಜೆಪಿ ಸೋಲಲು ಭೂಪೇಶ್ ಬಾಘೇಲ್ ಕಾರಣ: ತೇಜಸ್ವಿ ಸೂರ್ಯ

ಚತ್ತೀಸ್ಗಢ: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಲು ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್(Bhupesh Baghel) ಕಾರಣ ಎಂದು ಸಂಸದ ತೇಜಸ್ವಿ ಸೂರ್ಯ(Tejasvi Surya) ಗಂಭೀರ ಆರೋಪ ಮಾಡಿದ್ದಾರೆ. ಭೂಪೇಶ್ ಬಾಘೇಲ್ ಅವರು ಇಲ್ಲಿ ಹಣವನ್ನು ಲೂಟಿ ಮಾಡಿ ಕರ್ನಾಟಕಕ್ಕೆ ಕಳುಹಿಸಿದರು, ಅದೇ ಕಾರಣದಿಂದ ಬಿಜೆಪಿಯು ಕರ್ನಾಟಕದಲ್ಲಿ ಸೋತಿದೆ ಎಂದಿದ್ದಾರೆ.

ಆದರೆ ಈ ಬಾರಿ ಚತ್ತೀಸ್ಗಢದ ಯುವ ಜನತೆ ಛತ್ತೀಸ್ಗಢವನ್ನು ಭ್ರಷ್ಟಾಚಾರ, ವಂಶರಾಜಕಾರಣದಿಂದ ಮುಕ್ತಗೊಳಿಸಿ ಬಿಜೆಪಿಯನ್ನು ಸ್ಥಾಪಿಸಲು ಸಿದ್ಧವಾಗಿದ್ದಾರೆ ಎಂದು ಸೂರ್ಯ ಹೇಳಿದ್ದಾರೆ. ಛತ್ತೀಸ್ಗಢ ರಾಜ್ಯ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರಬರಲಿದೆ.

ಕಾಂಗ್ರೆಸ್ ಸರ್ಕಾರದ ನೀತಿಗಳಿಂದಾಗಿ ನೊಂದಿರುವ ರಾಜ್ಯದ ಯುವಜನರ ಪರವಾಗಿ ನ್ಯಾಯಕ್ಕಾಗಿ ಹೋರಾಡುವುದಾಗಿ ತೇಜಸ್ವಿ ಸೂರ್ಯ ಪ್ರತಿಜ್ಞೆ ಮಾಡಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಭರವಸೆ ನೀಡಿದರು.

Loading

Leave a Reply

Your email address will not be published. Required fields are marked *