ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಮೋಹನ್‌ ದಾಸರಿ

ಬೆಂಗಳೂರು: ಬೆಂಗಳೂರಿಗೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಬೆಂಗಳೂರಿನ ಜಲಮೂಲಗಳನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ ಒತ್ತಾಯಿಸಿದರು.

ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಎಂಜಿ ರಸ್ತೆಯಲ್ಲಿ ಎಎಪಿ ಪತ್ರ ಚಳುವಳಿ ಅಭಿಯಾನ ನಡೆಸಿತು. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಮೋಹನ್‌ ದಸಾರಿ ಅವರು, ತಮಿಳುನಾಡು ಸರ್ಕಾರವು ಕಾವೇರಿ ನೀರನ್ನು ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವ ನಿರ್ಣಯವನ್ನು ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದೆ. ಆದರೆ ನಮ್ಮ ರಾಜ್ಯದಲ್ಲಿ ಸಂಕಷ್ಟ ಕಾಲದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ತಕ್ಷಣ ಸದನವನ್ನು ಕರೆದು ಬರ ಸಂಕಷ್ಟದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಬೇಕು ಎಂದರು.

Loading

Leave a Reply

Your email address will not be published. Required fields are marked *