ಬೆಂಗಳೂರು: ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನವನ್ನು ಸ್ಫೂರ್ತಿ ದಿನ ಹೆಸರಿನಲ್ಲಿ ಆಚರಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು. ಈ ಹಿಂದಿನ ಸರಕಾರ ಘೋಷಣೆ ಮಾಡಿತ್ತು. ಆದರೆ, ಚುನಾವಣೆ ಕಾರಣದಿಂದಾಗಿ ಆಚರಿಸಲು ಆಗಿಲ್ಲ. ಆದರೆ, ನಮ್ಮ ಸರಕಾರ ಆ ದಿನವನ್ನು ಸ್ಫೂರ್ತಿ ದಿನ ಎಂದು ಆಚರಿಸಲಾಗುವುದು ಎಂದು ಸಿದ್ಧರಾಮಯ್ಯ ತಿಳಿಸಿದರು.
ಕಲೆ ಮತ್ತು ತಂತ್ರಜ್ಞಾನದ ಮೂಲಕ ವಿದೇಶಿ ಕಲಾವಿದರಿಂದ ತಯಾರಾದ ಪಿಆರ್ಕೆ ಕಲಾಕೃತಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅನಾವರಣ ಆಗಿದೆ. ಪುನೀತ್ ಹುಟ್ಟು ಹಾಕಿರೋ ಪಿಆರ್ಕೆ ಸ್ಟುಡಿಯೋಸ್ ಸಹಯೋಗದಲ್ಲಿ ಅಪ್ಪು ಕಲಾಕೃತಿ ಬಿಡುಗಡೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ (Ashwini Puneeth Rajkumar) ಕುಟುಂಬದ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ಕೂಡ ಸಾಥ್ ನೀಡಿದರು.