ಬೆಂಗಳೂರು: ಜೆಡಿಎಸ್ ಬಿಜೆಪಿ ಮೈತ್ರಿ ಆಗಿ ಒಂದು ತಿಂಗಳು ಕಳೆದರೂ ಜೆಡಿಎಸ್ ಮನೆಯಲ್ಲಿ ಅಸಮಾಧಾನದ ಹೊಗೆ ಇನ್ನೂ ಕಡಿಮೆಯಾಗಿಲ್ಲ. ಬಿಜೆಪಿ ಜೊತೆಗಿನ ದೋಸ್ತಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸಿಡಿದೆದ್ದಿದ್ದಾರೆ. ಮತ್ತೊಂದೆಡೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು,
ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ ಎನ್ನುವ ಪತ್ರಿಕಾ ಪ್ರಕಟಣೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ವಜಾಗೊಳಿಸಿ ಹೆಚ್ಡಿ ದೇವೇಗೌಡ ಅವರ ಪ್ರಕಟಣೆ ಪತ್ರವೊಂದು ವೈರಲ್ ಆಗಿದೆ.