ಬೆಂಗಳೂರು;- ಶಿಕ್ಷಣ ಇಲಾಖೆಯಿಂದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟವಾಗಿದೆ.ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಅಕ್ಟೋಬರ್ 21ರಂದು ಕೌನ್ಸೆಲಿಂಗ್ ನಡೆಯಲಿದೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಲಿದೆ. ಅ.21ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೌನ್ಸೆಲಿಂಗ್ ಆಯೋಜಿಸಲಾಗಿದೆ.