ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.ಕಳೆದ ಸೋಮವಾರ ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಯಲ್ಲಿ ಓಪನ್ ಹಾರ್ಟ್ ಸರ್ಜರಿಗೊಳಗಾಗಿರುವ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿಯವರು ವಾರ್ಡ್ ಗೆ ಶಿಫ್ಟ್ ಆಗಿದ್ದಾರೆ. ಕಳೆದ ನಾಲ್ಕು ದಿನದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.