ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!

ತುಮಕೂರು;- ತುಮಕೂರಿನ‌ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಬನಸಿರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಗೃಹಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಘಟನೆ ಜರುಗಿದೆ. ಬಿಇ ಮೂರನೇ ಸೆಮಿಸ್ಟರ್ ನ ಐಎಸ್ ವಿಭಾಗದಲ್ಲಿ ಓದುತ್ತಿದ್ದ ಬನಸಿರಿ‌ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸ್ಥಳಕ್ಕೆ ಡಿವೈಎಸ್ ಪಿ ಚಂದ್ರಶೇಖರ್, ತಿಲಕ್ ಪಾರ್ಕ್ ಸರ್ಕಲ್ ಇನ್ಸ್​ ಪೆಕ್ಟರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪರೀಕ್ಷೆಯಲ್ಲಿ ಕೆಲ ಸಬ್ಜೆಕ್ಟ್​​ಗಳು ಬ್ಯಾಕ್ ಉಳಿದ ಕಾರಣ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಬನಸಿರಿ‌ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ‌ಮೂಲದವರಾಗಿದ್ದಾರೆ.

Loading

Leave a Reply

Your email address will not be published. Required fields are marked *