Aryavardhan Guruji: ಆರ್ಯವರ್ಧನ್ ಗುರೂಜಿಗೆ ‘ಹುಲಿ ಉಗುರು’ ತಂದಿಟ್ಟ ಸಂಕಷ್ಟ..!

ಬೆಂಗಳೂರು;- ಬಿಗ್ ಬಾಸ್​ ಮಾಜಿ ಸ್ಪರ್ಧಿ ಆರ್ಯವರ್ಧನ್​ಗೆ ಕಚೇರಿ ಮೇಲೆ ಹುಲಿ ಉಗುರು ಪೆಂಡೆಂಟ್ ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪೆಂಡೆಂಟ್​ ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಆರ್ಯವರ್ಧನ್ ಕೂಡ ಬಿಗ್ ಬಾಸ್ ಸ್ಪರ್ಧಿಯಾಗಿದ್ದರು. ಆ ಸಮಯದಲ್ಲೇ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು. ಈಗ ಅದನ್ನು ಪತ್ತೆ ಹಚ್ಚಲಾಗಿದೆ. ಆರ್ಯವರ್ಧನ್ ಕಚೇರಿಗೆ ಆಗಮಿಸಿದ ಅರಣ್ಯಾಧಿಕಾರಿಗಳು, ನೋಟಿಸ್ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್ಯವರ್ಧನ್ ಕುತ್ತಿಗೆಯಲ್ಲಿ ವ್ಯಾಘ್ರನಖ ಹಾಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಚಿನ್ನದ ಪೆಂಡೆಂಟ್ ಆಗಿರುವ ಕಾರಣದಿಂದಾಗಿ ಅರಣ್ಯಾಧಿಕಾರಿಗಳು ಅದನ್ನು ಪರಿಶೀಲಿಸುತ್ತಿದ್ದಾರೆ. ಹುಲಿ ಉಗುರನ್ನು ಮಾತ್ರ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಇದು ಮೂರು ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನದ ಚೈನಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾನೂನಿನ ಮುಂದೆ ಎಲ್ಲರೂ ಒಂದೇ. ಅವರು ಯಾವುದೇ ಪಕ್ಷದಲ್ಲಿ ಇರಲಿ, ಎಂತಹ ಗಣ್ಯ ವ್ಯಕ್ತಿಗಳೇ ಆಗಿರಲಿ. ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರೆ ಕ್ರಮ ತಗೆದುಕೊಳ್ಳಲಿ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಇಂತಹ ಪ್ರಕರಣವನ್ನು ಅರಣ್ಯ ಸಚಿವರು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

Loading

Leave a Reply

Your email address will not be published. Required fields are marked *