ಬೆಳಗಾವಿ: ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲಿ ಹುಲಿ ಪೆಂಡೆಂಟ್ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ. ಮದುವೆ ಸಮಯದಲ್ಲಿ ಯಾರೋ ಗಿಫ್ಟ್ ಕೊಟ್ಟಿದ್ದರು ಅಂತ ಅದನ್ನ ಹಾಕಿದ್ದ. ಮೃಣಾಲ್ ಹಾಕಿದ ಪೆಂಡೆಂಟ್ ಪ್ಲಾಸ್ಟಿಕ್‌ದ್ದು. ಇದು ಒರಿಜಿನಲ್ ಪೆಂಡೆಂಟ್ ಅಲ್ಲ.ನಾನೂ ಸಸ್ಯಾಹಾರಿ ಹುಲಿ ಜಿಂಕೆ ಕೋಳಿ, ಇನ್ಯಾವುದೇ ಬಲಿಯನ್ನು ನಾನು ಇಷ್ಟ ಪಡಲ್ಲ. ಸದ್ಯ ನಮ್ಮ ಸಂಬಂಧಿಕರು ಬಂದಿದ್ದಾರೆ ಅವರನ್ನು ಬೀಳ್ಕೊಟ್ಟು ಬರ್ತಿನಿ. ನಂತರ ಅಧಿಕಾರಿಗಳು ಕೇಳುವ ಎಲ್ಲದಕ್ಕೂ ಉತ್ತರ ಕೊಡ್ತೀನಿ ಎಂದು ಸಚಿವೆ ತಿಳಿಸಿದರು.