ಬೆಂಗಳೂರು: ಹುಲಿ ಉಗುರನ್ನೊಳಗೊಂಡ ಆಭರಣ ಧರಿಸಿದ್ದ ಕಾರಣಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಂದ ಭಾನುವಾರ ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಿಗ್ʼಬಾಸ್ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು ಮಂಜೂರಾಗಿದೆ. 2ನೇ ಎಸಿಜೆಎಂ ಕೋರ್ಟ್ ನಿಂದ ಜಾಮೀನು ನೀಡಿದ್ದು, ನ್ಯಾಯಾಧೀಶರ ನರೇಂದ್ರ ಅವರಿಂದ ಆದೇಶ ಹೊರಬಿದ್ದಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದ ಕೇಸಲ್ಲಿ ಜಾಮೀನು ಸಿಕ್ಕಿದ್ದು ವರ್ತೂರ್ ಸಂತೋಷ್ ಪರ ವಕೀಲ ನಟರಾಜ್ ಅರಣ್ಯ ಅಧಿಕಾರಿಗಳ ಪ್ರಕ್ರಿಯಾ ವೈಫಲ್ಯದ ಬಗ್ಗೆ ವಾದ ಮಂಡನೆ ಮಾಡಿದ್ದರು. ಸದ್ಯ ಪರಪ್ಪನ ಅಗ್ರಹಾರದಲ್ಲಿ ವರ್ತೂರು ಸಂತೋಷ್ ಇದ್ದುಇಂದು ಸಂಜೆ ವೇಳೆಗೆ ವರ್ತೂರ್ ಸಂತೋಷ್ ಬಿಡುಗಡೆ ಸಾಧ್ಯತೆ ಇದೆ.