ಬೆಳಗಾವಿ: ಬೆಳಗಾವಿಯಲ್ಲಿ ಪಂಚಾಯತ್ ರಾಜ್ ಇಲಾಖೆ ಎಇಇ M.S.ಬಿರಾದಾರ ಮನೆ ಮೇಲೆ ಲೋಕಾ ದಾಳಿ ಮಾಡಿದೆ. ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟಮೆಂರ್ಟ್ನಲ್ಲಿ ಇರುವ ನಿವಾಸದ ಮೇಲೆ ದಾಳಿ ಮಾಡಿದ್ದು, ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳ ಮೂರು ತಂಡದಿಂದ ಶೋಧ ಕಾರ್ಯ ಮುಂದುವರೆಸಿದ್ದು,
ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗುತ್ತಿದೆ. ಅತ್ತ ಕಲಬುರಗಿ ಜಿಲ್ಲೆಯ ಟೌನ್ ಪ್ಲ್ಯಾನರ್ ಅಪ್ಪಾಸಾಹೇಬ್ ಕಾಂಬಳೆ ಮನೆ ಮೇಲು ದಾಳಿ ಮಾಡಲಾಗಿದೆ. ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಇರೋ ಕಾರ್ಖಾನೆ ಮೇಲೆ ದಾಳಿ ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.