ಬೆಂಗಳೂರು: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು;- ಸಿಎಂ ಸಿದ್ದರಾಮಯ್ಯ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ ಎಂದು ಹೇಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಸ್ಪಷ್ಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ನಿಮ್ಮ ಸರ್ಕಾರಕ್ಕೆ ಮುಖಭಂಗವಾಗುವುದನ್ನು ತಪ್ಪಿಸುವ ಸಲುವಾಗಿ ತಾವು ವ್ಯರ್ಥ ಕಸರತ್ತು ಮಾಡುತ್ತಿದ್ದೀರಿ. ಜನತೆಯ ಬಾಯಾರಿಕೆಯನ್ನು ತಣಿಸಬೇಕಾದ ಕೇಂದ್ರ ಸರ್ಕಾರ ಬದಲಿಗೆ ತನ್ನ ಸುಳ್ಳುಗಳ ದಾಹ ತಣಿಸಿಕೊಳ್ಳಲು ಮುಂದಾಗಿ ನೀರಿನ ವಿಚಾರದಲ್ಲಿ ಕ್ಷುಲ್ಲಕ ರಾಜಕಾರಣ ನಡೆಸಿರುವುದು ಬೇಸರದ ಸಂಗತಿ. ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿರುವುದು ನೀವು ಮತ್ತು ನಿಮ್ಮ ಸರ್ಕಾರ ಎಂದು ಟೀಕಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಕರ್ನಾಟಕದ ವಿರುದ್ಧ ದ್ವೇಷ ಸಾಧಿಸುವಂತೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಉತ್ತರ ಕೊಡಿ. ಮೋದಿ ಎಂಬ ಅಭಿಯಾನವನ್ನು ಪ್ರಾರಂಭಿಸಿ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಐದು ಪ್ರಶ್ನೆಗಳನ್ನು ಕೇಳಿದ್ದೆ. ಅವುಗಳಲ್ಲಿ ಎರಡು ಪ್ರಶ್ನೆಗಳಿಗಷ್ಟೇ ಉತ್ತರಿಸಿರುವ ಸಚಿವರು ಉಳಿದಂತೆ ನೀಡಿರುವ ಉತ್ತರಗಳಿಗೂ ನಮ್ಮ ಪ್ರಶ್ನೆಗಳಿಗೂ ಸಂಬಂಧವೇ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯಕ್ಕೆ ಸಂಬಂಧಿಸಿದ ನೀರಾವರಿ ಯೋಜನೆಗಳು ಹೇಗೆ ಕೇಂದ್ರ ಬಿಜೆಪಿ ಸರ್ಕಾರದ ತಿರಸ್ಕಾರ, ಅವಗಣನೆಯಿಂದಾಗಿ ಧೂಳು ಹಿಡಿಯುತ್ತಿವೆ ಎನ್ನುವುದನ್ನು ಮತ್ತೊಮ್ಮೆ ವಾಸ್ತವಾಂಶಗಳ ಮೂಲಕ ನಿಮ್ಮ ಮುಂದಿರಿಸುತ್ತಿದ್ದೇನೆ. ತಾವು ವಿಷಯವನ್ನು ಸರಿಯಾಗಿ ಗ್ರಹಿಸಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದ ಧೋರಣೆ ಮತ್ತು ಉದ್ದೇಶಪೂರ್ವಕವಾದ ಅನ್ಯಾಯವನ್ನು ಸರಿಪಡಿಸುತ್ತಿರಿ ಎಂದು ಭಾವಿಸುತ್ತೇನೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

Loading

Leave a Reply

Your email address will not be published. Required fields are marked *