Sachin Tendulkar: ವಾಂಖೆಡೆಯಲ್ಲಿ 22 ಅಡಿ ಎತ್ತರದ ಸಚಿನ್ ಪ್ರತಿಮೆ ಅನಾವರಣ

ಮುಂಬೈ: ಕ್ರಿಕೆಟ್‌ ದೇವರು ಎಂದೇ ಕರೆಸಿಕೊಳ್ಳುವ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರ ಬೃಹತ್‌ ಪ್ರತಿಮೆಯನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅನಾವರಣಗೊಳಿಸಲಾಗಿದೆ. ಕ್ರಿಕೆಟ್‌ ಲೋಕದಲ್ಲಿ ಹಲವಾರು ದಾಖಲೆಗಳನ್ನು ಬರೆದಿರುವ ದಿಗ್ಗಜ ಕ್ರಿಕೆಟಿಗ ಸಚಿನ್‌ ಅವರ ಪಾಲಿಗೆ, ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣವು  ತುಂಬಾ ವಿಶೇಷ. ಹೀಗಾಗಿ ಅವರಿಗೆ ಗೌರವಾರ್ಥವಾಗಿ ಪ್ರತಿಮೆ ನಿರ್ಮಿಸಲಾಗಿದೆ. ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂದೆ ಪ್ರತಿಮೆ ಅನಾವರಣಗೊಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿನ್‌ ತೆಂಡೂಲ್ಕರ್‌ ಪತ್ನಿ ಅಂಜಲಿ, ಪುತ್ರಿ ಸಾರಾ, ಸಹೋದರ ಅಜಿತ್‌ ಜೊತೆಗೆ ಪಾಲ್ಗೊಂಡಿದ್ದರು. ಐಸಿಸಿ ಮಾಜಿ ಅಧ್ಯಕ್ಷ ಶರದ್‌ ಪವಾರ್‌, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಉಪಾಧ್ಯಕ್ಷ ರಾಜೀವ್‌ ಶುಕ್ಲಾ ಇದ್ದರು. ಈ ವರ್ಷದ ಏಪ್ರಿಲ್‌ನಲ್ಲಿ ಸಚಿನ್ ಅವರು ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಹೀಗಾಗಿ ಪ್ರತಿಮೆಯನ್ನು ಅವರ 50 ವರ್ಷಗಳ ಅರ್ಥಪೂರ್ಣ ಬದುಕಿಗೆ ಸಮರ್ಪಿಸಲಾಗಿದೆ.

Loading

Leave a Reply

Your email address will not be published. Required fields are marked *