ಜಾತಿ ನಿಂದನೆ ಆರೋಪ; ಮತ್ತೊಮ್ಮೆ ಪುನೀತ್ ಕೆರೆಹಳ್ಳಿ ಬಂಧನ

 ಬೆಂಗಳೂರು: ಜಾತಿ ನಿಂದನೆ ಆರೋಪದಡಿ ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರಣಧೀರ ಪಡೆಯ ಮುಖಂಡ ಬೈರಪ್ಪ ಹರೀಶ್‌ಕುಮಾರ್‌ ಅವರು ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಜಾತಿ ನಿಂದನೆ ದೂರು ನೀಡಿದ್ದರು. ಫೇಸ್‌ಬುಕ್‌ನಲ್ಲಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಬೇರೆ ಬೇರೆ ಆರೋಪಗಳ ಅಡಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಪುನೀತ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಹ ಸಲ್ಲಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಬಂಧನ ಮಾಡಲಾಗಿತ್ತು. ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾಧ್ಯಮದಲ್ಲಿ ಪ್ರಕಟವಾದ ವರದಿಯನ್ನು ನಾನು ಫೇಸ್‌ಬುಕ್ ಖಾತೆಯಲ್ಲಿ ಶೇರ್‌ ಮಾಡಿದ್ದೆ. ಈ ಪೋಸ್ಟ್‌ ನಂತರ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಬೈರಪ್ಪ ಹರೀಶ್‌ಕುಮಾರ್‌ ಉಲ್ಲೇಖಿಸಿದ್ದರು.

Loading

Leave a Reply

Your email address will not be published. Required fields are marked *