ಬೆಂಗಳೂರು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ, ಹಿಂದಿನ ಕಾರು ಚಾಲಕ ಪೊಲೀಸ್ ವಶಕ್ಕೆ..!

ಬೆಂಗಳೂರಲ್ಲಿ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಕೊಲೆ ಕೇಸ್​ಗೆ ಸಂಬಂಧಿಸಿ ಪ್ರತಿಮಾ ಕೊಲೆ ಕೇಸ್​ನಲ್ಲಿ ಓರ್ವ ಆರೋಪಿ ವಶಕ್ಕೆ ಪಡೆಯಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಡಿಸಿಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗ್ತಿದೆ. ನಾಲ್ಕು ವರ್ಷದಿಂದ ಪ್ರತಿಮಾ ಕಾರು ಚಾಲಕನಾಗಿ ಕೆಲಸ ಮಾಡ್ತಿದ್ದ. 10 ದಿನದ ಹಿಂದೆ ಕಿರಣ್​​ನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆರೋಪಿ ಕಿರಣ್​ನನ್ನ ಮಹದೇಶ್ವರಬೆಟ್ಟದಲ್ಲಿ ವಶಕ್ಕೆ ಪಡೆಯಲಾಗಿದೆ. ಸದ್ಯಕ್ಕೆ ಪ್ರಕರಣದ ತನಿಖೆ ಮುಂದುವರಿದಿದೆ ಎಂದರು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ತುಡ್ಕಿ ಮೂಲದ ಪ್ರತಿಮಾಗೆ 18 ವರ್ಷಗಳ ಹಿಂದೆ ವಿವಾಹವಾಗಿತ್ತು. ನಂತರ ಭೂ ವಿಜ್ಞಾನ ಇಲಾಖೆಯಲ್ಲಿ ನೌಕರಿ ದೊರೆತಿದ್ದರಿಂದ ಪ್ರತಿಮಾ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು. ಹಲವು ವರ್ಷ ರಾಮನಗರ ಜಿಲ್ಲೆಯಲ್ಲಿ ಕೆಲಸ ಮಾಡಿದ್ದ ಪ್ರತಿಮಾ ನಂತರ ರೆಡು ವರ್ಷಗಳ ಹಿಂದೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು. ಎಂದಿನಂತೆ ಕಚೇರಿ ಕೆಲಸ ಮುಗಿದ ಮೇಲೆ ಶನಿವಾರ ರಾತ್ರಿ 8 ಗಂಟೆಗೆ ಕಚೇರಿಯಿಂದ ಕಾರು ಚಾಲಕ ಮನೆಗೆ ಡ್ರಾಪ್‌ ಮಾಡಿ ತೆರಳಿದ್ದ.‌ಬಳಿಕ ಹಂತಕರು ಬಂದು ಕೊಲೆ ಮಾಡಿ ಹೋಗಿದ್ದಾರೆ. ಮನೆಯ ಒಳಗೆ ಬಂದು ಕೊಲೆ ಮಾಡಿ ಹೋಗಿರುವುದರಿಂದ ಇದು ಪ್ರೀ ಪ್ಲಾನ್ ಮರ್ಡರ್ ಎಂದು ಶಂಕಿಸಲಾಗಿತ್ತು

ಭಾನುವಾರ ಕಾರ್ಯಕ್ರಮ ಒಂದಕ್ಕೆ ಹೋಗಬೇಕಿದ್ದರಿಂದ ರಾತ್ರಿ ಪ್ರತಿಮಾರಿಗೆ ಅವರ ಸಹೋದರ ಕರೆ ಮಾಡಿದಾಗ ಕರೆ ಸ್ವೀಕರಿಸಿರಲಿಲ್ಲ. ಬೆಳಿಗ್ಗೆಯೂ ಕರೆ ಸ್ವೀಕರಿಸದಿದ್ದಾಗ ಅನುಮಾನಗೊಂಡು ಕೆಳಗಿನ ಮನೆಯವರಿಗೆ ಫೋನ್ ಮಾಡಿ‌ನೋಡಲು ತಿಳಿಸಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿ ವಾಸವಿದ್ದ ಮನೆಯವರು ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಪರಿಚಿತರಿಂದಲೇ ಕೊಲೆಯಾಗಿರುವ ಅನುಮಾನ ಇರುವ ಹಿನ್ನೆಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ

 

 

Loading

Leave a Reply

Your email address will not be published. Required fields are marked *