ಬೆಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯದ ಎಲ್ಲಾ ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿಯಿಂದ ಇವಿಎಂ ಪರಿಶೀಲನೆಗಾಗಿ ಅಣಕು ಮತದಾನ ಮಾಡುತ್ತಿದ್ದಾರೆ. ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಬೆಳಗಾವಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೋಲಾರ, ಚಿಕ್ಕಬಳ್ಳಾಪುರ, ವಿಜಯನಗರ, ತುಮಕೂರು, ಚಿತ್ರದುರ್ಗ, ಮೈಸೂರು, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾವೇರಿ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಯಾದಗಿರಿ, ಬೆಂಗಳೂರು ಗ್ರಾಮಾಂತರ ಮತ್ತು ಗದಗ ಜಿಲ್ಲೆಯ ಮತಗಟ್ಟೆಗಳಲ್ಲಿ ಅಣಕು ಮತದಾನ ನಡೆಯುತ್ತಿದೆ.