ಕಳ್ಳತನಕ್ಕೆ ಸಾಥ್ ಕೊಟ್ಟ ರೈಲ್ವೆ ಹೆಡ್​ಕಾನ್ಸ್​ಟೇಬಲ್​ ಅರೆಸ್ಟ್

ಬೆಂಗಳೂರು;- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳ್ಳನೊಂದಿಗೆ ಶಾಮೀಲಾಗಿ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ರೈಲ್ವೆ ಹೆಡ್​ಕಾನ್ಸ್​ಟೇಬಲ್​ ಅರೆಸ್ಟ್ ಆಗಿದ್ದಾರೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಪೊಲೀಸ್ ಠಾಣೆಯಲ್ಲಿ ಹೆಡ್​ಕಾನ್ಸ್​ಟೇಬಲ್ ಆಗಿರುವ ಸಿದ್ದರಾಮರೆಡ್ಡಿ ಹಾಗೂ ಖದೀಮ ಸಾಬಣ್ಣ ಬಂಧಿತರು

ಪೊಲೀಸ್ ಕಸ್ಟಡಿ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. 2011ರ ಬ್ಯಾಚ್ ಸಿಬ್ಬಂದಿಯಾಗಿದ್ದ ಸಿದ್ದರಾಮರೆಡ್ಡಿ, ರೈಲ್ವೇ ಹೆಡ್​ಕಾನ್ಸ್​ಟೇಬಲ್ ಆಗಿ ರಾಯಚೂರಿನಲ್ಲಿ ಸೇವೆಗೆ ಸೇರಿದ್ದರು. ಸಾಬಣ್ಣ ಸಹ ರಾಯಚೂರು ಮೂಲದವನಾಗಿದ್ದು, ಇಬ್ಬರ ನಡುವೆ ಪರಿಚಯವಾಗಿತ್ತು. ಕಾಲ ಕ್ರಮೇಣ ಹೆಡ್​ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು ಸಿದ್ದರಾಮ ಬೆಂಗಳೂರು ನಗರಕ್ಕೆ ವರ್ಗಾವಣೆ ಮಾಡಿಸಿಕೊಂಡಿದ್ದ. ಮತ್ತೊಂದೆಡೆ ಸಾಬಣ್ಣ ಬೆಂಗಳೂರಿನ ಚಿಕ್ಕಬಾಣವಾರ ಬಳಿ ಮನೆ ಮಾಡಿಕೊಂಡಿದ್ದ. ಈ ಮಧ್ಯೆ ಇಬ್ಬರ ನಡುವೆ ಸಂಪರ್ಕ ಬೆಸೆದುಕೊಂಡಿದ್ದರು.

Loading

Leave a Reply

Your email address will not be published. Required fields are marked *