ಭಾರತ V/s ನೆದರ್ಲೆಂಡ್ಸ್‌ ಪಂದ್ಯ: ಇಂದು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಭದ್ರತೆ

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಸಿಸಿ ಏಕದಿನ ವಿಶ್ವಕಪ್‌ನ ಭಾರತ ಹಾಗೂ ನೆದರ್ಲೆಂಡ್ಸ್​ ನಡುವಿನ ಪಂದ್ಯ ನಡೆಯಲಿದೆ. ಹೀಗಾಗಿ ಸುಗಮ ಸಂಚಾರದ ದೃಷ್ಟಿಯಿಂದ ಮೈದಾನದ ಸುತ್ತಮುತ್ತ ಸರಕು ಹಾಗೂ ಸಾಗಣಿಕೆ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ. ವಿಶ್ವಕಪ್‌ನಲ್ಲಿ ಲೀಗ್ ಹಂತದ ಮತ್ತು ಭಾರತ ತಂಡದ ಕೊನೆಯ ಪಂದ್ಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಯಾವುದೇ ರೀತಿಯ ಸಂಚಾರ ದಟ್ಟಣೆ ಆಗದಂತೆ ಕ್ರಮವಹಿಸಲಾಗಿದೆ. ಕ್ಯಾಬ್​ಗಳಿಗೆ ಪಿಕ್ ಅಪ್ ಅಂಡ್ ಡ್ರಾಪ್ ಸ್ಥಳಗಳನ್ನ ಗುರುತಿಸಲಾಗಿದೆ. ವಾರಾಂತ್ಯ ಆಗಿರುವುದರಿಂದ ಭಾನುವಾರ ಸಾರ್ವಜನಿಕರು ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಸಾಧ್ಯವಾದಷ್ಡು ಕಡಿಮೆ ಮಾಡಿದರೆ ಉತ್ತಮ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

ಟೂರ್ನಿಯಲ್ಲಿ ಒಂದೂ ಸೋಲು ಕಾಣದೇ ಟೇಬಲ್​ ಟಾಪ್​ನಲ್ಲಿರುವ ಟೀಮ್​ ಇಂಡಿಯಾಕ್ಕೆ ತಳ ಮಟ್ಟದಲ್ಲಿರುವ ಕ್ರಿಕೆಟ್​ ಶಿಶು ನೆದರ್ಲೆಂಡ್ಸ್​ ಸಾವಾಲು ಒಡ್ಡುತ್ತಿದೆ. ಡಚ್​ ತಂಡ ಅಂಕಪಟ್ಟಿಯಲ್ಲಿ ಕೆಳಗೆ ಇರಬಹುದು. ಹಾಗೆಂದ ಮಾತ್ರಕ್ಕೆ ಕೇವಲವಾಗಿ ನೋಡಲು ಸಾಧ್ಯವಿಲ್ಲ. ಏಕೆಂದರೆ ಟೂರ್ನಿಯಲ್ಲಿ ಬಲಿಷ್ಟ ಬ್ಯಾಟಿಂಗ್​​ ಬಲವನ್ನು ಹೊಂದಿರುವ ದಕ್ಷಿಣ ಆಫ್ರಿಕಾವನ್ನೇ ನೆದರ್ಲೆಂಡ್ಸ್​ ಮಣಿಸಿತ್ತು.

Loading

Leave a Reply

Your email address will not be published. Required fields are marked *