ನಡುರಸ್ತೆಯಲ್ಲೇ ಬಿಎಂಟಿಸಿ ಬಸ್‌ ನಲ್ಲಿ ಬೆಂಕಿ ಅವಘಡ

ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಜಾಗರೂಕತೆಯಿಂದ ಭಾರಿ ಅಪಾಯದ ಘಟನೆ ಇಲ್ಲಿನ ಟೌನ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

ದಾಸನಪುರ ಡಿಪೋದಿಂದ ನೆಲಮಂಗಲ ಪಟ್ಟಣಕ್ಕೆ ಆಗಮಿಸುತ್ತಿದ್ದ ಬಿಎಂಟಿಸಿ ಬಸ್‌ ನಗರದ ಜೆಪಿ ಆಸ್ಪತ್ರೆ ಸಮೀಪ ಶಾರ್ಟ್‌ ಸಕ್ರ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇನ್ನೂ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಭಯಗೊಂಡಿದ್ದಾರೆ. ಬಸ್‌ ನಲ್ಲಿದ್ದ ಜನರು ಕೂಗಾಡಿದ್ದಾರೆ, ತಕ್ಷಣ ಬಸ್‌ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿ ನಂತರ ಹಿಂದೆ ಬರುತ್ತಿದ್ದ ಬಸ್‌ನಲ್ಲಿದ್ದ ಬೆಂಕಿ ನಂದಿಸುವ ಸಾಧನದಿಂದ ಬೆಂಕಿಯನ್ನು ನಂದಿಸುವ ಮೂಲಕ ಜಾಗರೂಕತೆಯಿಂದ ಭಾರಿ ಅಪಾಯವನ್ನು ತಪ್ಪಿಸಿದ್ದಾರೆ.

ಅಲ್ಲದೇ ಬೆಂಕಿ ಅವಘಡದ ಘಟನೆಯಲ್ಲಿಅದೃಷ್ಟವಶಾತ್‌ ಯಾರಿಗೂ ತೊಂದರೆ ಆಗಿಲ್ಲ. ಬೆಂಕಿ ಕಾಣಿಸಿಕೊಂಡ ವಿಚಾರ ತಿಳಿದು ಜನರು ಹೆಚ್ಚಾಗಿ ಸೇರಿಕೊಂಡ ಪರಿಣಾಮ ಸ್ಥಳಕ್ಕೆ ಟೌನ್‌ ಇನ್‌ಸ್ಪೆಕ್ಟರ್‌ ಶಶಿಧರ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Loading

Leave a Reply

Your email address will not be published. Required fields are marked *